spot_img
spot_img
25.5 C
Hubli
Friday, October 7, 2022
HomeKannadaಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಗದಗ : ಬೆಂಗಳೂರಿನ ಹಿಂದುಸ್ಥಾನ ಏರೊನಾಟಿಕ್ಸ್ ಲಿಮಿಟೆಡ್‌ನ ಟ್ರೇನಿಂಗ್ ಸಂಸ್ಥೆ(ಊಂಐ)ಯು ಫಿಟ್ಟರ್, ಟರ್ನರ್, ಮಶಿನಿಷ್ಟ, ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ, ಪೌಂಡರಿಮೆನ್ ಹಾಗೂ ಶೀಟ್‌ಮೆಟಲ್ ವರ್ಕರ್, ಐ.ಟಿ.ಐ.ಟ್ರೇಡಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೊದಲು ಆನ್‌ಲೈನ್ ವೆಬ್‌ಸೈಟ್ apprenticeshipindia.org/ candiadate ನಲ್ಲಿ ಹೆಸರು ನೋಂದಾಯಿಸಿಕೊಂಡು ಅಪ್ರೆಂಟಿಸ್ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ ಕಛೇರಿಗೆ ಭೇಟಿ ನೀಡಿ ನಿಗದಿತ ನಮೂನೆಯ ಅರ್ಜಿಯನ್ನು ಪಡೆಯಬೇಕು.
ಅರ್ಜಿಯನ್ನು ಭರ್ತಿ ಮಾಡಿ ಸ್ವಧೃಢೀಕೃತ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಮತ್ತು ರಾಷ್ಟ್ರೀಯ ವೃತ್ತಿ ತರಬೇತಿ ಕೌನ್ಸಿಲ್‌ನಿಂದ ಅಂಗೀಕೃತವಾದ ಸಂಸ್ಥೆಯಿಂದ ಪಡೆದ ಐ.ಟಿ.ಐ. ಎನ್.ಸಿ.ವಿ.ಟಿ. ಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರ, ಪಿ.ಎಚ್, ಆರ್ಮಡ ಪಸರ್ನಲ್, ಆಧಾರಕಾರ್ಡ, ಪಾನಕಾರ್ಡ, ಆನ್‌ಲೈನ್ ಅಪ್ರೆಂಟಿಸ್ ನೋಂದಣಿ ಪ್ರತಿ ಹಾಗೂ ಇತ್ತೀಚಿನ ಎರಡು ಪಾಸ್‌ಪೊರ್ಟ ಸೈಜ್ ಫೊಟೊಗಳೊಂದಿಗೆ ಜು. ೨೨ರೊಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಖುದ್ದಾಗಿ ಬೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: ೦೮೩೭೨-೨೨೦೬೦೯ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ
ಗದಗ:  ಗದಗ ಜಿಲ್ಲೆಯ ರೋಣ ತಾಲೂಕಿನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳನ್ವಯ ಅಭ್ಯರ್ಥಿಯಿಂದ ತುಂಬಲು ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ ೧೭ ರೊಳಗೆ ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಆಹ್ವಾನ
ಗದಗ :ಗದಗ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ ( ನೇಮಕಾತಿ ಮತ್ತು ಸೇವಾ ಪರಿಷತ್ತುಗಳು) ನಿಯಮಗಳನ್ವಯ ಅಭ್ಯರ್ಥಿಯಿಂದ ತುಂಬಲು ೧೦ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಜುಲೈ ೧೭ ರೊಳಗೆ ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಗದಗ : ಕೆನೆರಾ ಬ್ಯಾಂಕ್ ದೇಶಪಾಂಡೆ ಆರ್.ಎಸ್.ಇ.ಟಿ.ಐ ದಾಂಡೇಲಿ ಹಾಗೂ ಜೆ.ಸಿ.ಬಿ ಇಂಡಿಯಾ ಲಿಮಿಟೆಡ್ ಸಹಯೋಗದಲ್ಲಿ ಉಚಿತ ಜೆ.ಸಿ.ಬಿ. ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದ ವಯೋಮಾನದವರಾಗಿರಬೇಕು. ಅಭ್ಯರ್ಥಿಗಳು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಭೇತಿಯ ಅವಶ್ಯಕತೆ ಹಾಗೂ ಈಗ ಮಾಡುತ್ತಿರುವ ಕೆಲಸದ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜುಲೈ ೧೦ ರೊಳಗಾಗಿ ಕೆನೆರಾ ಬ್ಯಾಂಕ್ ದೇಶಪಾಂಡೆ ಆರ್.ಎಸ್.ಇ.ಟಿ.ಐ ವಿಸ್ತರಣಾ ಕೇಂದ್ರ ಹಸನಮಾಳ ದಾಂಡೇಲಿ-೫೮೧೩೨೫ ವಿಳಾಸಕ್ಕೆ ಅಥವಾ ೯೪೪೯೭೮೨೪೨೫/೬೩೬೩೪೨೯೮೮೯ ಸಂಖ್ಯೆಗೆ ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೆನೆರಾ ಬ್ಯಾಂಕ್ ಆರ್.ಎಸ್.ಇ.ಟಿ.ಐಯು ಪ್ರಕಟಣೆಯಲ್ಲಿ ತಿಳಿಸಿದೆ.

spot_img

SURYADEVOBHAVA: Sunlight is a ray of hope for “Vitamin D” deficiency

In the fast-paced life and humdrum of modern life, pretending a lack of time, the current generation is not attending to basic bodily needs...

Veteran Actor Arun Bali passes away

Arun Bali, known for his roles in television series such as Swabhimaan and the hit film 3 Idiots, died on Friday at the age...

LEAVE A REPLY

Please enter your comment!
Please enter your name here

This is the title of the web page
This is the title of the web page