spot_img
spot_img
30 C
Hubli
Tuesday, October 4, 2022
HomeKannadaಹುಬ್ಬಳ್ಳಿ : ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ : ಎಚ್. ರಾಮನಗೌಡರ

ಹುಬ್ಬಳ್ಳಿ : ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ : ಎಚ್. ರಾಮನಗೌಡರ

ಹುಬ್ಬಳ್ಳಿ: ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಇಲ್ಲಿಂದ ಮಹಾರಾಷ್ಟ್ರ ರಾಜ್ಯಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ.

ಮೊದಲ ಹಂತದಲ್ಲಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿರುವ ಜಿಲ್ಲೆಗಳ ಮೀರಜ್, ಈಚಲಕರಂಜಿ,
ಸೊಲ್ಲಾಪುರ, ಬಾರ್ಸಿ,
ಔರಂಗಾಬಾದ್, ಪಂಡರಾಪುರ,ತುಳಜಾಪುರ ಮತ್ತಿತರ ಸ್ಥಳಗಳಿಗೆ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಮೀರಜ್ ಮತ್ತು ಈಚಲಕರಂಜಿ ಬಸ್ಸುಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.ಇನ್ನುಳಿದ
ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು.

ಮುಂಬೈ, ಶಿರಡಿ,ಪಿಂಪ್ರಿ, ಹೈದರಾಬಾದ್, ಚೆನ್ನೈ, ಸೋಲ್ಲಾಪುರ ಮುಂತಾದ ಪ್ರಮುಖ ಸ್ಥಳಗಳಿಗೆ ವೋಲ್ವೊ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ರಾಜಹಂಸ ಸೇರಿದಂತೆ 26 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಸಂಚರಿಸುತ್ತಿದ್ದವು.

ಇವುಗಳೊಂದಿಗೆ ಮುಂಬೈ, ಪೂನಾ, ಬೊರಿವಿಲಿ, ಪಣಜಿ,ವಾಸ್ಕೋ, ಮಡಗಾಂವ,ಪಂಡರಾಪುರ, ಮೀರಜ, ಈಚಲಕರಂಜಿ, ಔರಂಗಾಬಾದ್, ಸೋಲಾಪುರ,ಬಾರ್ಶಿ, ಮಂತ್ರಾಲಯ, ಹೈದರಾಬಾದ್ ಮತ್ತಿತರ ಸ್ಥಳಗಳಿಗೆ 39 ವೇಗದೂತ ಬಸ್ಸುಗಳನ್ನು ಸಹಾ ಕಾರ್ಯಾಚರಣೆ ಮಾಡಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ವಾರಾಂತ್ಯ ಕರ್ಫ್ಯೂ; ಶನಿವಾರ, ರವಿವಾರ ಪ್ರಯಾಣಿಕರಿದ್ದರೆ ಬಸ್ ಸಂಚಾರ
ಹುಬ್ಬಳ್ಳಿ:
ಕೋವಿಡ್ -19 ರೂಪಾಂತರಿ ವೈರಾಣು ಹರಡುವಿಕೆ ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಶುಕ್ರವಾರ 7 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಶನಿವಾರ ಹಾಗೂ ರವಿವಾರದಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಬಸ್ ನಿಲ್ದಾಣಗಳಿಂದ ಬಸ್ಸುಗಳ ಸಂಚಾರ ಎಂದಿನಂತೆ ಇರುತ್ತದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಮುಂಗಡ ಬುಕ್ಕಿಂಗ್ ಪ್ರಯಾಣಿಕರ ಸಂಖ್ಯೆ ಆಧರಿಸಿ ದೂರ ಮಾರ್ಗದ ರಾತ್ರಿ ಸಾರಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಸೋಮವಾರ ಬೆಳಿಗ್ಗೆ 6 ರಿಂದ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸಲಿವೆ ಎಂದು ತಿಳಿಸಿದ್ದಾರೆ.

spot_img

Son dies at Garba event, shocked dad passes away hours later

A 35-year-old man died of a heart attack while attending a Garba event in Maharashtra. His dad, who had rushed him to the hospital,...

Keshwapur police nab two accused, seize two bikes

Hubballi: The Keshwapur police have nabbed two accused on charges of lifting bikes. The police seized one Splendor and one Hero Honda Hunk from...

LEAVE A REPLY

Please enter your comment!
Please enter your name here

This is the title of the web page
This is the title of the web page