spot_img
spot_img
27 C
Hubli
Wednesday, December 7, 2022
HomeKannadaಹೇಳಿ ಹೋಗು ಕಾರಣವಾ….

ಹೇಳಿ ಹೋಗು ಕಾರಣವಾ….

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ತೀವ್ರವಾಗ್ದಾಳಿ ನಡೆಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿರುವ ಅವರು , ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುವುದು ಪ್ರಜಾಪ್ರಭುತ್ವದ ರೂಢಿ. ಆದರೆ ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ. ಯಡಿಯೂರಪ್ಪನವರು ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಅವರ ಸರ್ಕಾರದ ಭ್ರಷ್ಟಾಚಾರವೇ?” ಎಂಬುದನ್ನ ತಿಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

“ಯಡಿಯೂರಪ್ಪನವರ ರಾಜೀನಾಮೆ ನಿರೀಕ್ಷಿತವಾದುದು. ಹಿಂದೆಯೇ ನಾನು ಹೇಳಿರುವುದು ನಿಜವಾಗಿದೆ. ಈ ಬಗ್ಗೆ ಸಂಭ್ರಮ ಪಡುವಂತಹದ್ದೇನೂ ಇಲ್ಲ. ಭ್ರಷ್ಟ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು. ಆ ದಿನಗಳು ಸದ್ಯದಲ್ಲಿಯೇ ಬರಲಿದೆ.” ಎಂದು ಅವರು ಹೇಳಿದ್ದಾರೆ.

 

“ ಯಡಿಯೂರಪ್ಪನವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ.ಯಡಿಯೂರಪ್ಪಅವರು ಹೋದರೂ, ಇನ್ನೊಬ್ಬರು ಬಂದರೂ ಅದರ ಭ್ರಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ” ಎಂದು ಹೇಳಿದ್ದಾರೆ.

ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜಾರಿ ಪಾರ್ಟಿ’ ಎಂದು ಜರಿದಿರುವ ಅವರು, “ಯಡಿಯೂರಪ್ಪನವರ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ.

‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ,” ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Accident: Sindagi CPI Ravi Ukkund, his wife died on the spot

Kalaburgi: Sindagi Circle Inspector Ravi Ukkund, 43, and his wife Madhu, 40, were killed on the spot after the car in which they were...

Akhil’s body found, postmortem is going on

Hubballi: Finally, the police have found the dead boy of Akhil Mahajanshet in a sugarcane field in Devikoppa, near Kalaghatagi, said local sources. And...

LEAVE A REPLY

Please enter your comment!
Please enter your name here

This is the title of the web page
This is the title of the web page