ಹುಬ್ಬಳ್ಳಿ:
ಕೇರಳ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಅವಧಿಯೊಳಗೆ ಪಡೆದಿರುವ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಇಂದು (05-08-2021 ರಂದು )ಬೆಳಿಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ ನೇತೃತ್ವದಲ್ಲಿ ಮಹಾರಾಷ್ಟ್ರದಿಂದ ರಾಜ್ಯ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಬಸ್‌ಗಳ ಮೂಲಕ ಆಗಮಿಸಿದ ಪ್ರಯಾಣಿಕರ ವಿವರ ಪರಿಶೀಲಿಸಲಾಯಿತು.
ಆರ್.ಟಿ.ಪಿ.ಸಿ.ಆರ್ ವರದಿ ಹೊಂದದೇ ರಾಜ್ಯಕ್ಕೆ ಬಂದಿರುವ ಮಹಾರಾಷ್ಟ್ರದ ಪುಣೆಯ ಓರ್ವ ಪ್ರಯಾಣಿಕನನ್ನು ಹುಬ್ಬಳ್ಳಿಯ ಅಂಜುಮನ್ ಆಸ್ಪತ್ರೆ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಆರ್.ಟಿ.ಪಿ.ಸಿ.ಆರ್ ತಪಾಸಣೆಗಾಗಿ ಸ್ವಾಬ್ ಸಂಗ್ರಹಣೆ ಮಾಡಲಾಗಿದೆ.
ಇನ್ನು ಮುಂದೆ ಪ್ರತಿದಿನ ಆರ್.ಟಿ.ಪಿ.ಸಿ.ಆರ್ ವರದಿ ಹೊಂದದೇ ಕೇರಳ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆ ಮಾಡಲಾಗುವುದು ಎಂದು ಮಹಾನಗರಪಾಲಿಕೆಯ ಮುಖ್ಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.