spot_img
spot_img
spot_img
spot_img
20.5 C
Hubli
Monday, September 26, 2022
HomeStateಸಚಿವ ಜೋಶಿಯವರ ಬೇಡಿಕೆಗೆ ಸ್ಪಂದನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ ವಿಮಾನ ಚಾಲನಾ ತರಬೇತಿ...

ಸಚಿವ ಜೋಶಿಯವರ ಬೇಡಿಕೆಗೆ ಸ್ಪಂದನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ ವಿಮಾನ ಚಾಲನಾ ತರಬೇತಿ ಕೇಂದ್ರ

 

ನವದೆಹಲಿ : ವಾಣಿಜ್ಯ ನಗರಿ ಹುಬ್ಬಳ್ಳಿ ಹಿರಿಮೆಗೆ ಮತ್ತೊಂದು ಗರಿ ಸೇರಲಿದೆ. ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂದಿಯಾ ಮುಂದಾಗಿದ್ದಾರೆAದು ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಇಲಾಖಾ ಸಚಿವ ಶ್ರೀ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಹುಬ್ಬಳ್ಳಿಗೆ ಮತ್ತೊಂದು ಹಿರಿಮೆ ದೊರೆಯಲಿದೆ. ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್ಗಳ ಕೊರತೆಯನ್ನು ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರಕಾರ ಸ್ಥಾಪಿಸುತ್ತಿದ್ದು ಉತ್ತರ ಕರ್ನಾಟಕದಲ್ಲಿ ಯಾವದೇ ವೈಮಾನಿಕ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಖ್ಯಾತಿವೆತ್ತ ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿರುವುದು ಈ ಭಾಗದ ಜನತೆಗೆ ಸಂತೋಷಕರ ವಿಷಯ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜೋಶಿ, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಹರದೀಪ್ ಸಿಂಗ್ ಪುರಿ ಹಾಗೂ ಈಗಿನ ವಿಮಾನ ಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ, ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒತ್ತಾಯ ಮಾಡಿದ್ದು, ನನ್ನ ಬೇಡಿಕೆಗೆ ಸ್ಫಂದಿಸಿರುವ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಈ ಕ್ರಮದಿಂದ ಇಡೀ ಉತ್ತರ ಕರ್ನಾಟಕದ ವಿಮಾನ ಚಾಲನಾ ತರಬೇತಿ ಬಯಸುವ ಯುವಕರಿಗೆ ಇದೊಂದು ಒಳ್ಳೆಯ ಅವಕಾಶ ಸಿಕ್ಕಂತಾಗಿದೆಯಲ್ಲದೇ ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ ಎಂದೂ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ಇತ್ತ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳಿಗೆ ಧನ್ಯವಾದಗಳನ್ನು ಸಚಿವ ಜೋಶಿ ತಿಳಿಸಿದ್ದಾರೆ.

spot_img

Congress corporators decide not to take part in the civic honour program

Hubballi: Congress corporators have decided not to attend President Murmu’s civic honour programme organised by the HDMC on Monday. At an emergency late-night press conference,...

Murmu’s visit to Hubballi: No protest from Congress tomorrow

Hubballi: Congress party city district president Altaf Hallur has clarified that no protest or agitation was planned for tomorrow. He claimed rumours were spreading...

LEAVE A REPLY

Please enter your comment!
Please enter your name here

This is the title of the web page
This is the title of the web page