ಬಜರಂಗದಳವನ್ನು ನಿಷೇಧಿಸುವ ಹೇಳಿಕೆಯನ್ನು (Bajarang Dal Ban)ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಸ್ವಾಗತಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಪಿಎಫ್ಐ ಹಾಗೂ ಬಜರಂಗದಳವನ್ನು ನಿಷೇಧಿಸುವ ಭರವಸೆ ನೀಡಿದ್ದು, ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ಸಂದರ್ಭದಲ್ಲೇ ಅಖಿಲೇಶ್ ಕಾಂಗ್ರೆಸ್ ಪಕ್ಷದ ತೀರ್ಮಾನಕ್ಕೆತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೇಶ ಮತ್ತು ಸಮಾಜದಲ್ಲಿ ದ್ವೇಷ ಹರಡುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪುನರುಚ್ಚರಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಉತ್ತುಂಗದಲ್ಲಿದೆ.ಅಭಿವೃದ್ಧಿ ನಿಂತಿದೆ ಇಂತಹ ಸಂದರ್ಭದಲ್ಲಿ ದೇಶ ಮತ್ತು ಸಮಾಜದಲ್ಲಿ ದ್ವೇಷವನ್ನು ಹರಡುವ ಸಂಘಟನೆಗಳನ್ನು ನಿಷೇಧಿಸಬೇಕು. ಒಂದು ಕಾಲದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಆರೆಸ್ಸೆಸ್ ಅನ್ನು ನಿಷೇಧಿಸಿದ್ದರು ಎಂದು ಅಖಿಲೇಶ್ ಹೇಳಿಕೆ ನೀಡಿದ್ದಾರೆ.
ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಘಟಕ ಪ್ರಣಾಳಿಕೆಯಲ್ಲಿ ಹೇಳಿತ್ತು.
https://hubliexpress.com/tv9-kannada-c-voters-survey-congress-to-lead/