ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆಯು ಆರಂಭಗೊಂಡಿತು.
ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷರು ಮತ್ತು ಕರ್ನಾಟಕದ ಸಹ ಪ್ರಭಾರಿಗಳಾದ ಅರುಣಾ ಕುಮಾರಿ, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ರಾಜ್ಯದ ಸಚಿವರಾದ ಗೋವಿಂದ್ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಅವರು ಪಾಲ್ಗೊಳ್ಳುತ್ತಿದ್ದಾರೆ.
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಆರಂಭ
