Kannada

ಜೂ. 04 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿ ಮತ್ತು ಹುಬ್ಬಳ್ಳಿ ಗೆ

WhatsApp Group Join Now
Telegram Group Join Now

 

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜೂ. 04 ರಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜೂ.04 ರಂದು ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೆಳಿಗ್ಗೆ 10.40 ಕ್ಕೆ ಬೆಳಗಾವಿಗೆ ಆಗಮಿಸುವರು. 11 ಗಂಟೆಗೆ ಸುವರ್ಣ ವಿಧಾನಸೌಧ ಮೂರನೇ ಮಹಡಿಯ 354 ನೇ ಕೊಠಡಿಯಲ್ಲಿ ಬೆಳಗಾವಿ ಜಿಲ್ಲಾ ಕೋವಿಡ್ 19 ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವರು. ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಸವಾಯ್ ಗಂಧರ್ವ ಕಲಾಮಂದಿರದಲ್ಲಿ ಧಾರವಾಡ ಜಿಲ್ಲಾ ಕೋವಿಡ್ 19 ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯ ಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now

Related Posts

1 of 7
error: Content is protected !!