25.1 C
Hubli
Friday, May 27, 2022
HomeKannadaಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ: ಅಧಿವೇಶನದ ನಂತರ ಉದ್ಘಾಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ: ಅಧಿವೇಶನದ ನಂತರ ಉದ್ಘಾಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

spot_img

ಹಾವೇರಿ ಜಿಲ್ಲೆಗೆ ಪ್ರತ್ಯೇಕವಾದ ಹಾಲು ಒಕ್ಕೂಟ ಸ್ಥಾಪಿಸುವ ಪ್ರಕ್ರಿಯೆಯೂ ಅಂತಿಮ ಘಟ್ಟದಲ್ಲಿದ್ದು, ಅಧಿವೇಶನದ ನಂತರ ಪ್ರತ್ಯೇಕ ಮಾಡಿ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆಯಡಿ ತುಂಬಿರುವ ಕೆರೆಗೆ ಬಾಗಿನ ಅಪೀಸಿದ ನಂತರ ಮಾತನಾಡುತ್ತಿದ್ದರು.

ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆ ಪೂರ್ಣಗೊಂಡಿದೆ. ಸವಣೂರು ಕ್ಷೇತ್ರದಲ್ಲಿಯಲ್ಲದೆ, 14000 ಎಕರೆ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ. ಬ್ಯಾಡಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಅಧಿವೇಶನದ ನಂತರ ಉದ್ಘಾಟನೆಗೊಳ್ಳಲಿವೆ ಎಂದರು.

ರಾಜ್ಯದಲ್ಲಿ ಶಾಂತಿ ನೆಲಸಬೇಕು:
ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು “ರಾಜ್ಯದಲ್ಲಿ ಶಾಂತಿ ನೆಲಸಬೇಕು. ಉಚ್ಛ ನ್ಯಾಯಾಲಯದ ಆದೇಶವನ್ನು ಪರಿಪೂರ್ಣವಾಗಿ ಜಾರಿ ಮಾಡಬೇಕು. ಮಕ್ಕಳು ಯಾವುದೇ ಭೇಧಭಾವವಿಲ್ಲದೆ, ಒಮ್ಮನಸ್ಸಿನಿಂದ ಮೊದಲಿನಂತೆ ವಿದ್ಯಾರ್ಜನೆ ಮಾಡುವಂತೆ ಮಾಡುವುದು ನನ್ನ ಮೊದಲ ಕರ್ತವ್ಯ” ಎಂದರು.

ಆಯವ್ಯಯ: ರಾಜ್ಯದ ಆಯವ್ಯಯ ಪ್ರಕ್ರಿಯೆ ಪ್ರಾರಂಭವಾಗಿದೆ. ಬಹುತೇಕ ಎಲ್ಲಾ ಇಲಾಖೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ನಂತರ ಸಂಘಸಂಸ್ಥೆಗಳೊಂದಿಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಪೂರಕವಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ರೂಪಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗುವುದು ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಅತಿ ಹೆಚ್ಚು ಸಾಲವನ್ನು ಮಾಡಿದ ಸರ್ಕಾರ ಎಂಬ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಹಿಂದಿನ ಸಾಲಗಳನ್ನು ನಿಭಾಯಿಸಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತವನ್ನೂ ನಿಭಾಯಿಸಿ, ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಲು ಸರ್ವ ಪ್ರಯತ್ನವನ್ನೂ ನಮ್ಮ ಸರ್ಕಾರದಿಂದ ಮಾಡಲಾಗುತ್ತಿದೆ. ಎಲ್ಲವನ್ನೂ ಸರಿದೂಗಿಸಿ ಆಯವ್ಯಯವನ್ನು ಮಂಡಿಸಲಾಗುವುದು ಎಂದರು.

ರಾಷ್ಟ್ರಕವಿ:
ಕನ್ನಡ ಸಾಹಿತ್ಯ ಪರಿಷತ್ ಅಭಿಲಾಷೆಯಂತೆ ಹಿರಿಯ ಕವಿ ಚನ್ನವೀರ ಕಣವಿ ಅವರಿಗೆ ರಾಷ್ಟ್ರಕವಿ ಬಿರುದು ನೀಡಬೇಕೆನ್ನುವ ಬೇಡಿಕೆಯನ್ನು ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು ಎಂದರು.

spot_img

Mayoral Election: The BJP gains support of two more independent councillors

Hubballi: On the eve of the mayoral election for HDMC, the Bharatiya Janata Party got the support of two independent candidates. Kishan Belagavi, and Chandrika...

Congress names candidates for mayor and deputy mayor posts.

Hubballi: As the mayoral poll for Hubballi-Dharwad Municipal Corporation will be held tomorrow, it is clear that voting will take place to elect the...

LEAVE A REPLY

Please enter your comment!
Please enter your name here

This is the title of the web page
This is the title of the web page