ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಆದೇಶ ಹೊರಡಿಸಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರು (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ.
ಮಂಜೂರಾದ ಬೋಧಕರ ಹುದ್ದೆಗಳ ಶೇ 9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶ ಇದೆ.
ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಇಲಾಖೆಯ ವೆಬ್ಸೈಟ್ನಲ್ಲಿ ಲಭ್ಯಗೊಳಿಸುವ ಆನ್ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.