Kannada

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮ ಸಾಲ, ಸಹಾಯಧನ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಧಾರವಾಡ (ಕರ್ನಾಟಕ ವಾರ್ತೆ) ಅ.09: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃಧ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃಧ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃಧ್ಧಿ ನಿಗಮ, ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃಧ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃಧ್ಧಿ ನಿಗಮ ಹಾಗೂ ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮ ಸೇರಿ ವಿವಿಧ ನಿಗಮಗಳಿಂದ 2023-24ನೇ ಸಾಲಿನಲ್ಲಿ ವಿವಿಧ ಸಾಲ ಸಹಾಯಧನ ಸೌಲಭ್ಯಗಳನ್ನು ನೀಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಬಯಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್, ಸೇವಾ ಕೇಂದ್ರಗಳಲ್ಲಿ ಮಾತ್ರ ಅರ್ಹ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ತಮ್ಮ ಅರ್ಜಿಗಳನ್ನು ಕೌಶಲ್ಯ ಕರ್ನಾಟಕ ಪೋರ್ಟಲ್ https://www.kaushalkar.com ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬೇಕು.

ಆಸಕ್ತರು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃಧ್ಧಿ ನಿಗಮಕ್ಕೆ ಅ.31, 2023 ರೊಳಗೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃಧ್ಧಿ ನಿಗಮಕ್ಕೆ ನವೆಂಬರ್ 01, 2023 ರೊಳಗೆ ಮತ್ತು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃಧ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃಧ್ಧಿ ನಿಗಮ, ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃಧ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 03, 2023 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ ಡಿ.ಸಿ. ಕಂಪೌಂಡ ಆವರಣದ ಮಿನಿವಿಧಾನಸೌಧ ಕಟ್ಟಡದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಥವಾ ಇದೇ ಕಟ್ಟಡದಲ್ಲಿರುವ ಆಯಾ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಮತ್ತು ಕಚೇರಿ ದೂ.ಸಂ: 0836-2957829 ಸಂಪರ್ಕಿಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now

Related Posts

error: Content is protected !!