Kannada

ವಿದ್ಯಾನಗರ ಸನ್ಮಾಶನದಲ್ಲಿ ಶೀಘ್ರದಲ್ಲಿ ವಿದ್ಯುತ್ ಚಿತಾಗರ

WhatsApp Group Join Now
Telegram Group Join Now

 

ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

ಕೆನರಾ ಬ್ಯಾಂಕ್‌ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ, ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‌ಗಳನ್ನು ಒದಗಿಸಲಾಗುತ್ತಿದೆ‌. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆಗಸ್ಪ್ 31 ಒಳಗಾಗಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವುದು.

ಹುಬ್ಬಳ್ಳಿ ಮಂಟೂರು ಹರಿಶ್ಚಂದ್ರ ಸನ್ಮಾಶನದಲ್ಲಿ ಸ್ಮಾರ್ಟ್ ಸಿಟಿ ಅನುದಾನ ಅಡಿ 2.60‌ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರು ವಿದ್ಯುತ್ ಚಿತಾಗರ ಕಾಮಗಾರಿ ಪ್ರಗತಿಯಲ್ಲಿದೆ. ಹೆಗ್ಗೇರಿ ಸ್ಮಶಾನದಲ್ಲಿ 1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುವುದು. ಆನಂದ ನಗರ ಸನ್ಮಾಶನದಲ್ಲಿ 74 ಲಕ್ಷ ವೆಚ್ಚದಲ್ಲಿ ಗ್ಯಾಸ್ ಆಧಾರಿತ ಚಿತಾಗರ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಧಾರವಾಡ ಹೊಸ ಯಲ್ಲಾಪುರ ಸ್ಮಶಾನದಲ್ಲಿ 4.40 ಲಕ್ಷ ವೆಚ್ಚದಲ್ಲಿ ಗ್ಯಾಸ್ ಕ್ರಿಮೇಷನ್ ಚೆಂಬರ್ ಅಳವಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts

error: Content is protected !!