ಹುಬ್ಬಳ್ಳಿ: ಬ್ಲಾಕ್ ಫಂಗಸ್ಗೆ ರಾಜ್ಯ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕದಡಿ ಬ್ಲಾಕ್ ಫಂಗಸ್ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಕಿಮ್ಸ್‌ನಲ್ಲಿ ಬ್ಲಾಕ್ ಫಂಗಸ್ ಸರ್ಜರಿಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ತಕ್ಷಣವೇ ಖರೀದಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸಾರಿ( SARI) ಲಕ್ಷಣದಿಂದ ಆಸ್ಪತ್ರೆಗೆ ದಾಖಲಾಗಿ ಮರಣ ಹೊಂದಿದರೆ ಕೋವಿಡ್ ಮರಣ ಎಂದೇ ಪರಿಗಣಿಸಲಾಗುವುದು. ಸಾರಿ ಲಕ್ಷಣಗಳಿಂದ ತಂದೆ ತಾಯಿ ಮೃತಪಟ್ಟರೆ, ಮಕ್ಕಳಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು. ಅಂಪೋಟೆರಿಸನ್ ಬಿ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಎಫ್.ಐ.ಆರ್.ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.