Hubballi / Dharwad

ಕೃಷಿ ವಿವಿ, ಧಾರವಾಡ 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ

WhatsApp Group Join Now
Telegram Group Join Now

ಧಾರವಾಡ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು  ರೈತರ ಜ್ಞಾನಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ  ಕೃಷಿ ವಿಶ್ವವಿದ್ಯಾಲಯ ಧಾರವಾಡ 34ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

ಕೋವಿಡ್ ನಿಯಮಾವಳಿಯಂತೆ ನಡೆದ ಕಾರ್ಯಕ್ರಮದಲ್ಲಿ ಘಟಿಕೋತ್ಸವಕ್ಕೆ ಚಾಲನೆ ನೀಡಿದ ರಾಜ್ಯಪಾಲರು, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ 53 ಚಿನ್ನದ  ಪದಕ ಹಾಗೂ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 9 ನಗದು ಬಹುಮಾನಗಳನ್ನು ಸೇರಿದಂತೆ 63 ಪಿಎಚ್​​ಡಿ, 247 ಸ್ನಾತಕೋತ್ತರ ಹಾಗೂ 601 ಸ್ನಾತಕ ಪದವಿ ಒಟ್ಟಾರೆ 911 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೆಲ್ಕೋ ಇಂಡಿಯಾದ ಅಧ್ಯಕ್ಷರಾದ ಡಾ. ಹರೀಶ್ ಹಂದೆ ಅವರು ಘಟಿಕೋತ್ಸವದ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕುಲಪತಿಗಳಾದ ಡಾ. ಮಹಾದೇವ ಬ. ಚೆಟ್ಟಿ ವಿವಿಧ ಗಣ್ಯರು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now

Related Posts

1 of 106
error: Content is protected !!