ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ (DK Shivakumar) ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ ಆಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಹೌದು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ವಿಚಾರದಲ್ಲಿ ನಾನು ಹಲವು ಬಾರಿ ಸೋತಿದ್ದೇನೆ. ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿದ್ದೇನೆ. ಈಗ ಸಿದ್ದರಾಮಯ್ಯನವರು ನನಗೆ ಸಹಕರಿಸುವ ವಿಶ್ವಾಸವಿದೆ. ಆರಂಭದಲ್ಲಿ ಮಂತ್ರಿ ಮಾಡದಿದ್ದಾಗ ತಾಳ್ಮೆಯಿಂದ ಇರಲಿಲ್ವಾ. ಆವಾಗ ನಾನು ಸಿದ್ದರಾಮಯ್ಯನವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಹೇಳಿದ್ದಾರೆ.
ಅಜ್ಜಯ್ಯ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ. ದಿನೇಶ್ ಗುಂಡೂರಾವ್ ಅವರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ತಿಳಿಸಿದ್ದಾರೆ.
The Hubli Express is on WhatsApp now, you can join the WhatsApp group by clicking the link >>>>> https://chat.whatsapp.com/Hrmohnx3bkrEJRIv9kQsyD >>>>>>> You can follow us on Facebook @HubliExpress