ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಒಳ ಪ್ರಾಂಗಣದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಘಟಕದ ವತಿಯಿಂದ ವಿಮಾನ ನಿಲ್ದಾಣ ಪಿಐ ಜಗದೀಶ ಹಂಚಿನಾಳ ರವರ ನೇತೃತ್ವದಲ್ಲಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದೊಂದಿಗೆ ನಿರ್ದೇಶಕ ಪ್ರಮೋದಕುಮಾರ ಠಾಕರೆ ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ, ಕೆಎಸ್‌ಐಎಸ್‌ಎಫ್, ವಿಮಾನ ನಿಲ್ದಾಣ ಪೊಲೀಸ್ ಠಾಣಾ ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದರು.