KannadaState News

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆಗೆ ವ್ಯಾಪಕ ಸಿದ್ಧತೆ ಕೈಗೊಳ್ಳಲು ಸಚಿವದ್ವಯರ ಸೂಚನೆ

WhatsApp Group Join Now
Telegram Group Join Now

ಹುಬ್ಬಳ್ಳಿ: ಬರುವ ಜೂನ್ 21 ರಿಂದ ಜಿಲ್ಲೆಯಾದ್ಯಂತ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲು ಸರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಹಾಗೂ ಬೃಹತ್ ,ಮಧ್ಯಮ ಕೈಗಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಸೂಚನೆ ನೀಡಿದರು.

ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಸಂಜೆ ನಡೆದ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 16 ಲಕ್ಷ ಜನ 18 ವರ್ಷ ಮೇಲ್ಪಟ್ಟವರಿದ್ದಾರೆ. ಅವರೆಲ್ಲರಿಗೂ ಸುಮಾರು 32 ರಿಂದ 35 ಲಕ್ಷ ಡೋಸ್ ಲಸಿಕೆ ಬೇಕಾಗುತ್ತದೆ.ಕೇಂದ್ರ ಸರ್ಕಾರದಿಂದ ಅಗತ್ಯ ಪ್ರಮಾಣದ ಲಸಿಕೆ ಪೂರೈಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮಾತನಾಡಿ, ಪ್ರಧಾನ ಮಂತ್ರಿಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ಜೂನ್ 21 ರಿಂದ ಕೋವಿಡ್ ನಿರೋಧಕ ಲಸಿಕೆ ಹಾಕಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಜಿಪಂ‌ ಸಿಇಓ ಡಾ.ಬಿ.ಸುಶೀಲಾ, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಕುಷ್ಟರೋಗ ನಿರ್ಮೂಲಾನಾಧಿಕಾರಿ ಡಾ.ಶಶಿ ಪಾಟೀಲ ಮತ್ತಿತರರು ಇದ್ದರು.

WhatsApp Group Join Now
Telegram Group Join Now

Related Posts

1 of 110
error: Content is protected !!