ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ (Renukacharya) ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ರ್ಪಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ನಿರ್ಧಾರ ಕೈಗೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುವುದಾಗಿ ಸ್ಪಷ್ಪಪಡಿಸಿದ್ದಾರೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ನಿಂದ ಸ್ರ್ಪಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಈ ಮೂಲಕ ಎಂ.ಪಿ.ರೇಣುಕಾಚಾರ್ಯ ಕೇವಲ 4233 ಮತಗಳಿಂದ ಗೆದ್ದಿದ್ದರು. ಬಳಿಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದರು.
ಕೋವಿಡ್ ಸಂದರ್ಭದಲ್ಲಿ ರೇಣುಕಾಚಾರ್ಯ ಉತ್ತಮ ಕೆಲಸ ಮಾಡಿದ್ದರು. ಹೀಗಾಗಿ ಈ ಬಾರಿಯೂ ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ ಈ ಬಾರಿ ಸೋತಿರುವುದರಿಂದ ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
The Hubli Express is on WhatsApp now, you can join the WhatsApp group by clicking the link >>>>> https://chat.whatsapp.com/Hrmohnx3bkrEJRIv9kQsyD >>>>>>> You can follow us on Facebook @HubliExpress