ಬೆಂಗಳೂರು,15ಮೇ (ಹಿ.ಸ): ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ (Rain with thunders). ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುತ್ತೂರು, ಕುಂದಾಪುರ, ಮಾಣಿ, ಕಾರ್ಕಳ, ಭಾಗಮಂಡಲ, ಕೋಟ, ಪಣಂಬೂರು, ಹುಣಸೂರು, ತುಮಕೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಲವಿದ ವಾತಾವರಣ ನಿರ್ಮಾಣವಾಗಲಿದ್ದು ಸಂಜೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕೆಲವೆಡೆ ಬಿರುಗಾಳಿ ಸಹತ ಮಳೆ ಸುರಿದ ಹಿನ್ನೆಲೆ ಬೆಟ್ಟಗುಡ್ಡಗಳು ಕುಸಿದಿವೆ. ಇನ್ನು ಕೆಲವೆಡೆ ಕೃಷಿ ಭೂಮಿಗಳು ಜಲಾವೃತ ಆದ ಘಟನೆಗಳು ನಡೆದಿವೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.
Note: This news has been generated from a syndicated feed and has not been written or edited by the Hubli Express staff.
The Hubli Express is on WhatsApp now, you can join the WhatsApp group by clicking the link >>>>> https://chat.whatsapp.com/Hrmohnx3bkrEJRIv9kQsyD >>>>>>> You can follow us on Facebook @HubliExpress