spot_img
spot_img
23 C
Hubli
Monday, November 28, 2022
HomeHubballi / Dharwadಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ:-ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ:-ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ ಜ.14: ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಜನನಿಬಿಡ ಹಾಗೂ ವಾಹನ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಜಿಬ್ರಾ ಕ್ರಾಸಿಂಗ್ ಅಳವಡಿಸಬೇಕು. ಅಪಾಯಕಾರಿ ರಸ್ತೆ ಉಬ್ಬುಗಳನ್ನು ವೈಜ್ಞಾನಿಕವಾಗಿ ಸರಿಪಡಿಸಿ, ರಿಫ್ಲೆಕ್ಟರುಗಳನ್ನು ಅಳವಡಿಸಬೇಕು ಎಂದು ಮಹಾನಗರಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಸೂಚಿಸಿದರು .

ವಿಡಿಯೋ ಸಂವಾದದ ಮೂಲಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧಾರವಾಡ -ಅಮ್ಮಿನಭಾವಿ- ಸವದತ್ತಿ ರಸ್ತೆಯಲ್ಲಿರುವ ಅವೈಜ್ಞಾನಿಕ ಉಬ್ಬುಗಳು ಅಪಾಯಕಾರಿಯಾಗಿದ್ದು , ಒಂದು ವಾರದೊಳಗೆ ಅವುಗಳನ್ನು ತೆರವುಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಸೂಚಿಸಿದರು.

ನೈಋತ್ಯ ರೇಲ್ವೆಯ ವಿಭಾಗೀಯ ರೇಲ್ವೆ ವ್ಯವಸ್ಥಾಪಕ ಅರವಿಂದ ಮಾಳಖಂಡ ಮಾತನಾಡಿ, ರೇಲ್ವೆ ಸ್ಟೇಶನ್ ಸುತ್ತಮುತ್ತ ಹಾಗೂ ರೈಲ್ವೆ ಸ್ಟೇಶನ್‌ಗೆ ಆಗಮಿಸುವ ರಸ್ತೆಗಳಲ್ಲಿ ಅನಗತ್ಯ ವಾಹನಗಳ ನಿಲುಗಡೆಯಾಗುತ್ತಿವೆ. ಅಂಗಡಿ – ಮುಂಗಟ್ಟುಗಳು ರಸ್ತೆಯನ್ನು ಆಕ್ರಮಿಸಿಕೊಂಡಿರುವುದರಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿಗಳು ಸ್ಪಂದಿಸಿ , ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ಜರುಗಿಸಲು ನಿರ್ದೇಶನ ನೀಡಿದರು.

ರಸ್ತೆ ಸುರಕ್ಷತಾ ಬಾಬತ್ತಿನಲ್ಲಿ ಬಾಕಿ ಉಳಿದಿರುವ ಅನುದಾನವನ್ನು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ರಸ್ತೆಯ ಉಬ್ಬುಗಳಿಗೆ ರಿಫ್ಕೆಕ್ಟರ್‌ಗಳನ್ನು ಅಳವಡಿಸಲು ಬಳಸಬೇಕು. ಪಾಲಿಕೆಯ ಅನುದಾನವನ್ನೂ ಸಹ ಹೆಚ್ಚುವರಿಯಾಗಿ ಬಳಸಿಕೊಳ್ಳಬೇಕು ಎಂದರು.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ 2021 ರ ಸೆಪ್ಟಂಬರ್‌ನಿಂದ ಡಿಸೆಂಬರ್ ರವರೆಗೆ ವಿವಿಧ ವರ್ಗದ ಸಾರಿಗೆ ವಾಹನಗಳಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ನೀಡಲಾದ ರಹದಾರಿಗಳಿಗೆ ಘಟನೋತ್ತರ ಅನುಮೋದನೆಯನ್ನು ನೀಡಲಾಯಿತು.

ವಿ.ಆರ್‌.ಎಲ್‌.ಸಮೂಹ ಸಂಸ್ಥೆಯವರು ಕ್ಯಾರೇಜ್ ಬೈ ರೋಡ್ ಆಕ್ಟ್ ಅಡಿಯಲ್ಲಿ ಲೈಸೆನ್ಸ್ ನವೀಕರಣಕ್ಕಾಗಿ ಸಲ್ಲಿಸಲಾದ ಅರ್ಜಿಯನ್ನು ಸಭೆಯಲ್ಲಿ ಪರಿಶೀಲಿಸಿ ಮುಂದಿನ ಅವಧಿಗೆ ನವೀಕರಿಸಲು ಅನುಮೋದನೆ ನೀಡಲಾಯಿತು .

ಪಿಂಕ್ ಆಟೋರಿಕ್ಷಾ ಪರಿಕಲ್ಪನೆಯಡಿಯಲ್ಲಿ ಮಹಿಳಾ ಆಟೋ ರಿಕ್ಷಾ ಚಾಲಕರುಗಳಿಗೆ ಉತ್ತೇಜನ ನೀಡಿ, ಮಹಿಳಾ ಸಬಲೀಕರಣಗೊಳಿಸಲು ಇನ್ನರ್‌ವೀಲ್ ಕ್ಲಬ್ ಆಫ್ ಹುಬ್ಬಳ್ಳಿ ಸಂಸ್ಥೆಯು ಮಹಿಳಾ ಆಟೋರಿಕ್ಷಾ ಚಾಲಕರಿಗೆ ಹೊಸದಾಗಿ ರಹದಾರಿ ನೀಡುವಂತೆ ಮಾಡಿಕೊಂಡಿರುವ ಮನವಿಯನ್ನು ಪ್ರಾಧಿಕಾರದಲ್ಲಿ ಪರಿಶೀಲಿಸಿ , ರಹದಾರಿ ಮಂಜೂರಾತಿಗೆ ಘಟನೋತ್ತರ ಅನುಮೋದನೆಯನ್ನು ನೀಡಲಾಯಿತು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಬಿ.ಶಂಕರಪ್ಪ,ಕೆ.ದಾಮೋದರ , ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಚೌಡಣ್ಣವರ ಮತ್ತಿತರರು ಇದ್ದರು.

The Hubli Express is on WhatsApp now, you can join the WhatsApp group by clicking the link 

https://chat.whatsapp.com/C6J8Tg5qnmn3zSkcEKOtAd

You can follow us on Facebook @HubliExpress

 

 

Dharwad man booked for sexually harassing a minor girl

Hubballi: the cybercrime police booked A 24-year-old contractor from Dharwad for allegedly sexually harassing a minor. The police said that the Dharwad-based contractor, despite...

Video: You do not need to go to KRS to watch the musical fountain; you can enjoy it in our Hubballi

Hubballi: In just a few days, you will enjoy the musical fountain show in Hubballi, which means you do not need to go all...

LEAVE A REPLY

Please enter your comment!
Please enter your name here

This is the title of the web page
This is the title of the web page