spot_img
spot_img
21 C
Hubli
Friday, October 7, 2022
HomeHubballi / Dharwadಎಸ್ ಡಿ ಎಂ ಕೋವಿಡ್ ಎಲ್ಲಾ ತಪಾಸಣೆಗಳು ಪೂರ್ಣ ಇಂದು 2217 ವ್ಯಕ್ತಿಗಳ ತಪಾಸಣೆಗಳಲ್ಲಿ...

ಎಸ್ ಡಿ ಎಂ ಕೋವಿಡ್ ಎಲ್ಲಾ ತಪಾಸಣೆಗಳು ಪೂರ್ಣ ಇಂದು 2217 ವ್ಯಕ್ತಿಗಳ ತಪಾಸಣೆಗಳಲ್ಲಿ 25 ಜನರಿಗೆ ಕೋವಿಡ್ ದೃಢ

 

ಧಾರವಾಡ: ಇಲ್ಲಿನ ಎಸ್ ಡಿ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದು ಕೋವಿಡ್ ತಪಾಸಣೆಗೆ ಒಳಗಾಗಿದ್ದ 2217 ಜನರ ಕೋವಿಡ್ ತಪಾಸಣಾ ವರದಿಗಳು ಲಭ್ಯವಾಗಿದ್ದು ,ಇವರಲ್ಲಿ 25 ಜನರಿಗೆ ಮಾತ್ರ ಕೋವಿಡ್ ಸೋಂಕು ದೃಢವಾಗಿದೆ , ಪಾಸಿಟಿವಿಟಿ ದರ ಶೇ.1.12 ರಷ್ಟಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.

ಕಳೆದ ಮೂರು ದಿನಗಳ ಅವಧಿಯಲ್ಲಿ ತಪಾಸಣೆ ಮಾಡಲಾಗಿದ್ದ 1756 ಜನರಲ್ಲಿ 281 ಜನರಲ್ಲಿ ಸೋಂಕು ದೃಢಪಟ್ಟು ಪಾಸಿಟಿವಿಟಿ ದರ ಶೇ.16 ಕ್ಕೇರಿತ್ತು.
ನಿನ್ನೆ ಮತ್ತು ಇಂದು ಸ್ವ್ಯಾಬ್ ಸಂಗ್ರಹಿಸಿದ್ದ 2217 ಜನರಲ್ಲಿ ಕೇವಲ 25 ವ್ಯಕ್ತಿಗಳಲ್ಲಿ ಮಾತ್ರ ಸೋಂಕು ಕಂಡು ಬಂದಿದೆ ಪಾಸಿಟಿವಿಟಿ ದರ ಶೇ.1.12 ಇದೆ. ಎಸ್ ಡಿ ಎಂ‌ ಆವರಣದ ವಿದ್ಯಾರ್ಥಿಗಳು,ವೈದ್ಯರು,ಸಿಬ್ಬಂದಿ, ರೋಗಿಗಳು, ಸಹಾಯಕರು ಸೇರಿ ಒಟ್ಟು 3973 ತಪಾಸಣೆಯಿಂದ 306 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಎಸ್ ಡಿ ಎಂ ಆವರಣದ ವಿದ್ಯಾರ್ಥಿಗಳು,ವೈದ್ಯರು ಹಾಗೂ ಸಿಬ್ಬಂದಿ ವರ್ಗದ ಕೆಲವರಲ್ಲಿಯೇ ಈ ಸೋಂಕು ಸೀಮಿತವಾಗಿದೆ.ರೋಗಿಗಳು,ಅವರ ಆರೈಕೆದಾರರಲ್ಲಿ ಈ ಸೋಂಕು ವ್ಯಾಪಿಸಿಲ್ಲ. ಜಿಲ್ಲಾಡಳಿತ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸರು,ಎಸ್ ಡಿ ಎಂ ಆಡಳಿತ ಮಂಡಳಿ ಬಿಗಿಕ್ರಮಗಳನ್ನು ಮುಂದುವರೆಸಲಿವೆ ಎಂದು ಅವರು ತಿಳಿಸಿದ್ದಾರೆ.

spot_img

Unanimous decision to hike reservation for Scheduled Castes to 17 per cent, Scheduled Tribes to 7 per cent: CM Bommai

Bengaluru, Oct.7:It has been unanimously decided to hike reservation for the Scheduled Castes from 15 per cent to 17 per cent and the Scheduled...

SURYADEVOBHAVA: Sunlight is a ray of hope for “Vitamin D” deficiency

In the fast-paced life and humdrum of modern life, pretending a lack of time, the current generation is not attending to basic bodily needs...

LEAVE A REPLY

Please enter your comment!
Please enter your name here

This is the title of the web page
This is the title of the web page