Kannada

ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೋಳಿಯನ್ನು ಬಂಧಿಸಿ: ಸಿದ್ಧರಾಮಯ್ಯ

WhatsApp Group Join Now
Telegram Group Join Now

ಹುಬ್ಬಳ್ಳಿ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ತಕ್ಷಣವೇ ಬಂಧಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣದಲ್ಲಿ 164 ಹೇಳಿಕೆ ಕೊಟ್ಟಮೇಲೂ ಆರೋಪಿಯನ್ನು ಯಾಕೆ ಬಂಧಿಸಿಲ್ಲವೆಂದು ಅವರು ಪ್ರಶ್ನಿಸಿದರು.
ಇಡೀ ದೇಶದಲ್ಲಿ ಈ ರೀತಿಯ ಬೆಳವಣಿಗೆ ಎಲ್ಲಿಯಾದರೂ ಕಾಣಲು ಸಾಧ್ಯವೇ? ಅತ್ಯಾಚಾರದ ಆರೋಪಿ ನೇರವಾಗಿ ಗೃಹಸಚಿವರನ್ನು ಭೇಟಿಯಾಗುತ್ತಾರೆಂದರೆ ಏನರ್ಥ, ಅವರನ್ನು ಸಕರ್ಾರವೇ ರಕ್ಷಿಸುತ್ತಿದೆ ಎಂದು ಗುಮಾನಿ ವ್ಯಕ್ತಪಡಿಸಿದರು.
ಈ ಪ್ರಕರಣದ ತನಿಖಾಧಿಕಾರಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ, ಅತ್ಯಾಚಾರದ ಆರೋಪಿಯನ್ನು ರಕ್ಷಿಸುತ್ತಿರುವ ಗೃಹಸಚಿವ ಬಸವರಾಜ ಬೊಮ್ಮಾಯಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಲೂಟಿ ಹೊಡೆಯುವ ಖಾತೆ ಸಿಗದಕ್ಕೆ ಮುಖ್ಯಮಂತ್ರಿ ಬದಲಾವಣೆಗೆ, ಮಂತ್ರಿ ಸಿಪಿ ಯೋಗಿಶ್ವರ್ ಮುಂದಾಗಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದಶರ್ಿ ಹೇಳಿದ್ದಾರೆ. ಸಿಎಂ ಬದಲಾವಣೆ ಮಾಡಿದರೆ ಬಿಜೆಪಿಯಲ್ಲಿ ಮತ್ತೊಬ್ಬ ಸಮರ್ಥರು ಯಾರು ಇಲ್ಲ ಇದೇ ಕಾರಣಕ್ಕೆ ಆ ಪಕ್ಷದಲ್ಲಿ ಬೀದಿ ಕಾಳಗ ನಡೆಯುತ್ತಿದೆ.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದು ಸಿದ್ಧರಾಮಯ್ಯ ಆರೋಪಿಸಿದರು

WhatsApp Group Join Now
Telegram Group Join Now

Related Posts

1 of 7
error: Content is protected !!