ಬೆಂಗಳೂರು, ಮೇ.27 ಸರ್ಕಾರ ಈ ಹಿಂದೆ ಜಿಂದಾಲ್ ಸಂಸ್ಥೆಗೆ ಜಮೀನು ಮಾರಾಟ ಮಾಡುವ ನಿರ್ಧಾರಕ್ಕೆ ಗುರುವಾರದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡದೇ ಈ ಹಿಂದಿನ ಸಂಪುಟದಲ್ಲಿದ್ದ ಜಿಂದಾಲ್ ಸಂಸ್ಥೆಗೆ ಜಮೀನು ಮಾರಾಟದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ.
ಈ ಸಂಬಂಧ ಸಚಿವ ಸಂಪುಟ ಸಭೆಯ ಬಳಿಕ ಗೃಹ ಹಾಗೂ ಕಾನೂನು ಖಾತೆಗಳ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿ, ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ಜಿಂದಾಲ್ ಕಂಪೆನಿಗೆ ಜಮೀನು ಮಾರಾಟದ ಪ್ರಸ್ತಾವಕ್ಕೆ ಈ ಸಂಪುಟ ಸಭೆ ಅನುಮೋದನೆ ನೀಡಿಲ್ಲ ಎಂದರು.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠ ನಡೆಸಿ ಮಾತನಾಡಿದ ಬೊಮ್ಮಾಯಿ,ಜಿಂದಾಲ್ ಗೆ ಜಮೀನು ನೀಡುವ ಮುಂದೆ ಏನಾಗುತ್ತದೆ ಎನ್ನುವ ಬಗ್ಗೆ ಗೊತ್ತಿಲ್ಲ.ಜಿಂದಾಲ್ ಕುರಿತು ಹೈ ಕೋರ್ಟ್‌ನಲ್ಲಿ ಪಿಐಎಲ್ ಇದೆ. ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಕರಣ ಇದೆ.ಅಂದು ಕರ್ನಾಟಕ ಹೈಕೋರ್ಟ್ ಹೇಳಿತ್ತು. ಈಗ ಪಿಐಎಲ್ ಆಧಾರದಲ್ಲಿ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಕೋರ್ಟ್ ಏನು ತೀರ್ಪು ನೀಡುತ್ತದೆ ನೋಡಿ ಮುಂದೆ ತೀರ್ಮಾನ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.