Hubballi / Dharwad

ಹುಬ್ಬಳ್ಳಿ ಫ್ಕೈಓವರ್ ರಸ್ತೆ ಕಾರ್ಯ ತ್ವರಿತಗೊಳಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಷಿ

WhatsApp Group Join Now
Telegram Group Join Now

 

ಹುಬ್ಬಳ್ಳಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಿಸಲು ನಿರ್ಧರಿಸುವ ಫ್ಲೈ ಓವರ್ ರಸ್ತೆ ಕಾಮಗಾರಿ ಸಂಬಂಧಿತ ಕಾರ್ಯಗಳನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸೂಚಿಸಿದರು.

ಈ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು,ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೂಪಿಸಿದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹಾಗೂ ನಗರದ ಫ್ಲೈಓವರ್ ರಸ್ತೆ ಕಾಮಗಾರಿಗಳನ್ನು ಯಾವುದೇ ಅಡೆತಡೆಯಾಗದಂತೆ ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಬಿಆರ್‌ಟಿಎಸ್ ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಗಳು ಸಹಯೋಗದಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಕಾಮಗಾರಿಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕೆಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಸ್ಮಾರ್ಟಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್, ಮಸ್ತಾಕ್ ಬಿಜಾಪೂರಿ, ವಾಕರಸಾಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹೆಚ್.ಆರ್. ರಾಮನಗೌಡರ ತಹಶೀಲ್ದಾರರಾದ ಶಶಿಧರ್ ಮಾಡ್ಯಾಳ, ಪ್ರಕಾಶ್ ನಾಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts

1 of 106
error: Content is protected !!