ನವದೆಹಲಿ,24ಮೇ (ಹಿ.ಸ): ಪ್ರಧಾನಿ ನರೇಂದ್ರ ಮೋದಿ ಡೆಹರಾಡೂನ್ನಿಂದ-ದೆಹಲಿ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಉತ್ತರಾಖಂಡದಲ್ಲಿ ಪರಿಚಯಿಸಲಾಗುತ್ತಿರುವ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇದಾಗಿದೆ. ಈ ರೈಲು ಸೇವೆಯ ಆರಂಭದಿಂದ ರಾಜ್ಯಕ್ಕೆ ಆಗಮಿಸಲಿರುವ ಪ್ರವಾಸಿಗರು ಹಾಗೂ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವ ಒದಗಿಸಲಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ದೇಶೀಯವಾಗಿ ನಿರ್ಮಿಸಲಾಗಿದ್ದು, ಕವಚ್ ತಂತ್ರಜ್ಞಾನ ಸೇರಿದಂತೆ ಅತ್ಯಾಧುನಿಕ ಸುರಕ್ಷತೆಗಳನ್ನು ರೈಲಿನಲ್ಲಿ ಅಳವಡಿಸಲಾಗಿದೆ.
ದೇಶದ ರೈಲ್ವೆ ಮಾರ್ಗಗಳನ್ನು ಸಂಪೂರ್ಣವಾಗಿ ವಿದ್ಯುದ್ದೀಕರಣಗೊಳಿಸಲು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನುಸರಿಸಿ ಭಾರತೀಯ ರೈಲ್ವೆ ತ್ವರಿತ ಗತಿಯ ಕ್ರಮಗಳನ್ನು ಕೈಗೊಂಡಿದ್ದು, ಸ್ವಚ್ಛ ಸಾರಿಗೆ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ನಲ್ಲಿ ನೂತನ ವಿದ್ಯುದ್ದೀಕರಣ ರೈಲ್ವೆ ಮಾರ್ಗಗಳನ್ನು ನಾಳೆ ದೇಶಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಇದರೊಂದಿಗೆ ರಾಜ್ಯದ ಎಲ್ಲ ರೈಲು ಮಾರ್ಗಗಳು ವಿದ್ಯುದ್ದೀಕರಣಗೊಳ್ಳಲಿವೆ .